rel="stylesheet" href="test_files/core.css">

   
ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರ ಸ್ವೀಕಾರ


ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ನೂತನ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಸದಸ್ಯರಾದ ಬೈತಡ್ಕ ಜಾನಕಿ, ಸ್ಮಿತಾ ಅಮೃತರಾಜ್, ಆನಂದ್ ದಂಬೆಕೋಡಿ, ಪ್ರೇಮ ರಾಘವಯ್ಯ ಮತ್ತು ಎ.ಪಿ.ಧನಂಜಯ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.
ನಗರದ ಅರೆಭಾಷೆ ಸಂಸ್ಕøತಿ, ಸಾಹಿತ್ಯ ಅಕಾಡೆಮಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ನೂತನ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರು ಅರೆಭಾಷೆ, ಸಾಹಿತ್ಯ, ಸಂಸ್ಕøತಿಗೆ ತನ್ನದೇ ಆದ ಇತಿಹಾಸವಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸುವಂತಾಗಲು ಸರ್ಕಾರ ಅಕಾಡೆಮಿ ಸ್ಥಾಪಿಸಿದೆ. ಆ ನಿಟ್ಟಿನಲ್ಲಿ ಹಿರಿಯರ ಮಾರ್ಗದರ್ಶನ ಪಡೆದು ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಕನ್ನಡ ಭಾಷೆಯ ಉಪ ಭಾಷೆಗಳಾದ ಅರೆಭಾಷೆ ಸೇರಿದಂತೆ ಪ್ರಾದೇಶಿಕ ಭಾಷೆಗಳನ್ನು ಉಳಿಸಿ ಬೆಳೆಸುವುದು ಅತ್ಯಗತ್ಯವಾಗಿದೆ. ಪ್ರಾದೇಶಿಕ ಭಾಷೆಗಳಲ್ಲಿ ಸಾಹಿತ್ಯ, ಸಂಸ್ಕøತಿಯನ್ನು ತಿಳಿಸುವ ಮೂಲಕ ಮುಂದಿನ ತಲೆಮಾರಿಗೆ ಭಾಷೆ ಉಳಿಸಲು ಶ್ರಮಿಸಬೇಕಿದೆ ಎಂದರು.
ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಭಾಷಾ ಅಕಾಡೆಮಿಗಳು ಒಟ್ಟುಗೂಡಿ ಕಲೆ, ಸಂಸ್ಕøತಿ, ಸಾಹಿತ್ಯ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ನುಡಿದರು.
ಅಕಾಡೆಮಿ ಸದಸ್ಯರಾದ ಸ್ಮಿತಾ ಅಮೃತರಾಜ್ ಅವರು ಮಾತನಾಡಿ ಅರೆಭಾಷೆಯು ಶ್ರೀಮಂತ ಭಾಷೆಯಾಗಿದ್ದು, ಅರೆಭಾಷೆಯನ್ನು ಉಳಿಸಿ ಬೆಳೆಸಿದ್ದಲ್ಲಿ ಸ್ಥಳೀಯ ಕಲೆ, ಸಾಹಿತ್ಯ, ಸಂಸ್ಕøತಿ ಉಳಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಬೈತಡ್ಕ ಜಾನಕಿ ಅವರು ಮಾತನಾಡಿ ಅಕಾಡೆಮಿ ಸದಸ್ಯರಾಗಿದ್ದು ಸಂತಸವಾಗಿದೆ. ಜೊತೆಗೆ ಜವಾಬ್ದಾರಿ ಹೆಚ್ಚಾಗಿದೆ. ಅರೆಭಾಷೆಗೆ ಸಂಬಂಧಿಸಿದಂತೆ ಶೋಭಾನೆ, ಜಾನಪದ ಹಾಡುಗಳು ಹೀಗೆ ಹಲವು ಪುಸ್ತಕ ಬರೆದಿದ್ದೇನೆ ಎಂದರು.
ಕೊಡಗು ಗೌಡ ವಿದ್ಯಾಸಂಘದಿಂದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮಹಿಳಾ ಒಕ್ಕೂಟದಲ್ಲಿ ಸುಮಾರು 1800 ಮಂದಿ ಇದ್ದು, ಇವರನ್ನು ತೊಡಗಿಸಿಕೊಂಡು ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದರು.
ಎ.ಪಿ.ಧನಂಜಯ ಅವರು ಮಾತನಾಡಿ ರಾಷ್ಟ್ರದಲ್ಲಿ ನೂರಾರು ಭಾಷೆಗಳಿದ್ದು, ಹಲವು ಭಾಷೆಗಳು ನಶಿಸಿವೆ. ಪ್ರತಿಯೊಬ್ಬರೂ ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆ ಉಳಿಸಬೇಕು. ಕನ್ನಡ ಭಾಷೆಯ ಜೊತೆಗೆ ಇತರ ಉಪ ಭಾಷೆಗಳನ್ನು ಉಳಿಸಿ ಬೆಳೆಸಬೇಕು ಎಂದರು.
ಆನಂದ್ ದಂಬೆಕೋಡಿ ಮತ್ತು ಪ್ರೇಮ ರಾಘವಯ್ಯ ಅವರು ಅಕಾಡೆಮಿ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಮಾತನಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್ ಇತರರು ಇದ್ದರು


News and Events
Home   |   About Arebhashe Academy   |   Events   |   Culture   |   Gallery   |   Contact Us
ęCopyright 2014. Karnataka Arebhashe Academy. All rights reserved.